ಬೆಳಗಾವಿ:ಬಿಜೆಪಿ ತಕ್ಕೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಇದ್ದಾರೆ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಬಿಜೆಪಿಯ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಯ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಪಕ್ಷ ಸೇರ್ಪಡೆಯ ಬಗ್ಗೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.