ಹಾಸನ : ಜಿಲ್ಲೆಯ 4 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ, ಇಂಗ್ಲಿಷ್, ಸಮಾಜ ವಿಜ್ಞಾನ, ವಿಜ್ಞಾನ, ಗಣಿತ, ಹಿಂದಿ ಮತ್ತು ಉರ್ದು ಭಾಷೆಯನ್ನು ಬೋಧಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕಡೆ ದಿನ ಸೆ.21 ಆಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 08172-267373, 08172-268373.