ಹಾಸನ: ದೇಶದಲ್ಲಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾರೂ ಪ್ರಧಾನಿಯಾಗಲು ಸಾಧ್ಯವಿಲ್ಲವೇ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನಿಸಿದ್ದಾರೆ.

ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಬೇಲೂರಿನಲ್ಲಿ ಪ್ರಚಾರ ನಡೆಸುವ ವೇಳೆ ಮಾತನಾಡಿದ ಅವರು, ಮಾಧ್ಯಮದವರು ಕೂಡ ಮೋದಿ ಹೊರತುಪಡಿಸಿ ಬೇರೆ ಯಾರೂ ದೇಶ ಆಳಲು ಸಾಧ್ಯವಿಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದರು.

ಬಿಎಸ್​​ಪಿ ನಾಯಕಿ ಮಾಯಾವತಿ, ಸಿಎಂ ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಇವರ್ಯಾರಿಗೂ  ದೇಶ ಆಳುವ ಸಾಮರ್ಥ್ಯ ಇಲ್ಲವೇ ಎಂದು ಪ್ರಶ್ನೆ ಹಾಕಿದ್ದಾರೆ ದೊಡ್ಡಗೌಡ್ರು.