ಕಡೂರು: ಮೋದಿ ಗೆದ್ದರೆ ಹಿಟ್ಲರ್ ಆಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಡೂರಿನಲ್ಲಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ಸರ್ವಾಧಿಕಾರಿ ಆಗುತ್ತಾರೆ. ಭವಿಷ್ಯದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ. ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಜನ ನಾಶವಾಗುತ್ತಾರೆ. ಇದರೊಂದಿಗೆ ನಮ್ಮಲ್ಲೂ ಒಬ್ಬ ಹಿಟ್ಲರ್ ಹುಟ್ಟಿಕೊಳ್ಳುತ್ತಾನೆ. ಹಾಗಾಗಿ ಯಾವುದೇ ಕಾರಣಕ್ಕೂ ಕೂಡ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಡಿ ಎಂದರು.

ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಮತದಾರರಿಗೆ ಮನವಿ ಮಾಡಿದರು.