ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿಎಸ್ ವೈ ಶೀಘ್ರ ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕು. ಉತ್ತಮ ಆರೋಗ್ಯದೊಂದಿಗೆ ಜನರಿಗಾಗಿ ಕೆಲಸ ಮಾಡಲು ವಾಪಸ್ ಆಗಿ ಎಂದು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.