ಶಿವಮೊಗ್ಗ: ಯಡಿಯೂರಪ್ಪ ಅವರಿಗೆ ಈ ಜನ್ಮದಲ್ಲಿ ಮೈತ್ರಿ ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಎಂದು ಶಿವಮೊಗ್ಗದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಜನ್ಮದಲ್ಲಿ ಯಡಿಯೂರಪ್ಪ ಅವರಿಗೆ ಸಿಎಂ ಕುಮಾರಸ್ವಾಮಿ‌ ನೇತೃತ್ವದ ಮೈತ್ರಿ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ಬಿಜೆಪಿಯವರೇ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲಿದ್ದಾರೆ ಎಂದರು.

ಮೇ 23ರ ಬಳಿಕ ಸರ್ಕಾರ ಬೀಳುವುದು ಖಚಿತ. ಆದರೆ, ರಾಜ್ಯ ಸರ್ಕಾರವಲ್ಲ. ಕೇಂದ್ರ ಸರ್ಕಾರ ಎಂದು ಹೇಳಿದರು