ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಯಾವಾಗಲೂ ಸುಳ್ಳು ಹೇಳುತ್ತಾರೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರು ಹೇಳಿದ್ದಾರೆ.

 ಕಳೆದ 12 ದಿನಗಳವರೆಗೆ  ಯೂರೋಪ್ ಪ್ರವಾಸದಲ್ಲಿದ್ದರು. ಪ್ರವಾಸ ಮುಗಿಸಿಕೊಂಡು  ಇಂದು ಮುಂಜಾನೆ ರಾಜ್ಯಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿಯೇ ಇಲ್ಲ, ಜಾರಕಿಹೊಳಿ ಸಹೋದರರ ಸಮಸ್ಯೆ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.