ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪುನಃ ಲಾಕ್‍ಡೌನ್ ಜಾರಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಿಎಂ ಯಡಿಯೂರಪ್ಪ ಜನರು ಬೆಂಗಳೂರು ಬಿಟ್ಟು ಹೋಗದಂತೆ ಮನವಿ ಮಾಡಿದ್ದಾರೆ.

ಕೊರೋನಾ ಜೊತೆ ಬದುಕಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರದ ಮುಂದೆ ಲಾಕ್‍ಡೌನ್ ಮಾಡುವ ಆಲೋಚನೆ ಇಲ್ಲ. ಲಾಕ್‍ಡೌನ್ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿ ಅಷ್ಟ ಎಂದು ಹೇಳಿದ್ದಾರೆ.