ತುಮಕೂರು: ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಎದುರಾಗಿ ಕಾಂಗ್ರೆಸ್ ಹಾಲಿ ಸಂಸದ ಮುದ್ದಹನುಮೇಗೌಡ ಇಂದು ನಾಮಪತ್ರ ಸಲ್ಲಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾರಿಗೂ ಬಲಿಪಶುವಾಗುವುದಿಲ್ಲ.  ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಬಿ-ಫಾರಂ ಸಿಗದಿದ್ದರೂ ಕೂಡ ತಾನು ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಬಾವುಟಗಳೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಅವರು ನಾಮಪತ್ರ ಸಲ್ಲಿಸಿರುವುದು ಜೆಡಿಎಸ್ ಪಾಳ್ಯದಲ್ಲಿ ತಳ-ಮಳ ಶುರುವಾಗಿದೆ ಎಂಬುದು ಸುದ್ದಿ.