ಕಲಬುರಗಿ : ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎನ್. ಮಹೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ಪ್ರತ್ಯೇಕ ವಿಭಾಗ ತೆರೆಯುವ ಪ್ರಸ್ತಾಪವನ್ನು ಪುನರುಚ್ಚರಿಸಿದ್ದಾರೆ. ಕಡಿಮೆ ಸಂಖ್ಯಾ ಬಲ ಇದ್ದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದುವರಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಯುಕೆಜಿ ತರಗತಿ ಆರಂಭಿಸುವ ಉದ್ದೇಶ ಹೊಂದಲಾಗಿದೆ. ಪ್ರಥಮ ಹಂತವಾಗಿ ಸಾವಿರ ಶಾಲೆಗಳಲ್ಲಿ ಎಲ್ ಕೆಜಿ-ಯುಕೆಜಿ ಆರಂಭಕ್ಕೆ ಚಿಂತನೆ ನಡೆದಿದೆ. ಇಲ್ಲಿ ಇಂಗ್ಲಿಷ್ ಅನ್ನು ಒಂದು ಭಾಷೆಯನ್ನಾಗಿ ಕಲಿಸುವ ಯೋಚನೆ ಇದೆ ಎಂದರು.