ಚಿತ್ರದುರ್ಗ: ಕೋಟೆನಾಡಿನಲ್ಲಿ ಕನ್ನಡದಲ್ಲಿ ಮಾತನಾಡಿದ ನರೇಂದ್ರ ಮೋದಿಯವರು ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಯಿಂದ ಬಂದ ನನ್ನ ಆತ್ಮೀಯ ಬಂಧು- ಭಗನಿಯರೆ ನಿಮ್ಮ ಚೌಕಿದಾರನಿಂದ ಯುಗಾದಿ ಹಬ್ಬದ ಶುಭಾಶಯಗಳು ಎಂದು ಹೇಳಿದ ತಕ್ಷಣ ನೆರದೆಂತ ಜನರು ಪುಳಕಗೊಂಡರು.

 

ಮೊದಲಿಗೆ ಮಹಾರಾಷ್ಟ್ರದಲ್ಲಿ ಸಮಾವೇಶ ಮುಗಿಸಿದ ನಂತರ ಚಿತ್ರದುರ್ಗಕ್ಕೆ ಆಗಮಿಸಿರು ಮೋದಿ, ಪ್ರಥಮ ಬಾರಿಗೆ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿರುವ DRDO ಒಳಗಿರುವ ರನ್ ವೇಗೆ ವಿಶೇಷ ವಿಮಾನದಲ್ಲಿ ಬಂದಿಳಿದರು ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.