ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯಲ್ಲಿ ಖಾಲಿ ಇರುವ 413 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ 370, ನೌಕಾ ಅಕಾಡೆಮಿಯಲ್ಲಿ 43 ಹುದ್ದೆಗಳು ಖಾಲಿ ಇವೆ. ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹಾಗೂ ವಯೋಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 06 ಕಡೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ https://www.upsc.gov.in/ಗೆ ಸಂಪರ್ಕಿಸಬಹುದು.