ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿದೆ.

ಸಿಬಿಐ ತನಿಖಾಧಿಕಾರಿ ರಾಕೇಶ್ ರಂಜನ್ ನೇತೃತ್ವದಲ್ಲಿ ತನಿಖೆ ಚುರುಕುಗೊಳಿಸಿದ್ದ ಅಧಿಕಾರಿಗಳು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಇದರ ಮುಂದುವರೆದ ಭಾಗವಾಗಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

2016 ರಲ್ಲಿ ಧಾರವಾಡದಲ್ಲಿ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಸುಪಾರಿ ಹಂತಕರು ಕೊಲೆ ಮಾಡಿದ್ದು, ಇದರ ಹಿಂದೆ ಪ್ರಭಾವಿಯೊಬ್ಬರ ಕೈವಾಡವಿದೆ ಎನ್ನಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ ಸಿಬಿಐ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಅವರನ್ನು ಕರೆತಂದು ವಿಚಾರಣೆ ನಡೆಸಿದೆ ಎನ್ನಲಾಗಿದೆ.

ಧಾರವಾಡದ ಬರಕೊಟ್ರಿಯಲ್ಲಿರುವ ನಿವಾಸದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಯೋಗೀಶ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.