ನವದೆಹಲಿ : ಹೀಗೊಂದು ಚರ್ಚೆ ಬಿಜೆಪಿ ವಲಯದಲ್ಲಿ ನಡೆಯುತ್ತಿದೆ. ಕೇಂದ್ರ ಸರ್ಕಾರವು ರಾಜನಾಥ್ ಸಿಂಗ್ ಬದಲಿಗೆ ಹಾಲಿ ಗೃಹಮಂತ್ರಿ ಅಮಿತ್ ಶಾ ಅವರನ್ನು ರಕ್ಷಣಾ ಸಚಿವರನ್ನಾಗಿ ಮಾಡಲು ನಿರ್ಧರಿಸಿದೆ ಯಂತೆ

ಏಕೆಂದರೆ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರವು ಅಮಿತ್ ಶಾ ರನ್ನು ರಕ್ಷಣಾ ಸಚಿವರನ್ನಾಗಿ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಜುಲೈನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಈ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸಂಪುಟ ಪುನಾರಚನೆ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.