ಬೆಂಗಳೂರು: ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ ಸಿಎಂ ಕುಮಾರಸ್ವಾಮಿ ತಾವು ರಾಜೀನಾಮೆ ಸಲ್ಲಿಸಿರುವುದನ್ನು ಟ್ವೀಟ್ ಮಾಡಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ. ಕಳೆದ 14 ತಿಂಗಳು ಆಡಳಿತ ನಡೆಸಲು ಸಹಕಾರ ನೀಡಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಎಲ್ಲಾ ಶಾಸಕರು ಹಾಗೂ  ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ಬರೆದಿದ್ದಾರೆ.