ಬೆಂಗಳೂರು: ವಿಮಾನ ಮೂಲಕ ರಾಜ್ಯಕ್ಕೆ ಬರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ & ರಾಜಸ್ಥಾನದ ಜನರಿಗೆ ನಿರ್ಬಂಧ ಹೇರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರದ ಜನರು ರಸ್ತೆ ಮೂಲಕವೂ ರಾಜ್ಯಕ್ಕೆ ಬರಬಾರದು. ಈ ರಾಜ್ಯಗಳಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಜಾಸ್ತಿಯಾಗಿದ್ದು, ಸೋಂಕು ಹರಡುವುದನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.