ನವದೆಹಲಿ: ರಾಜ್ಯಗಳಿಗೆ ಈ ವರ್ಷ ಹೆಚ್ಚಿನ ಜಿಎಸ್​ಟಿ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಕೊರೋನಾ ವೈರಸ್ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಎಸ್​ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದ್ದು, ರಾಜ್ಯಗಳಿಗೆ ಹೆಚ್ಚಿನ ಜಿಎಸ್​ಟಿ ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಈ ಮಾಹಿತಿ ನೀಡಲಾಗಿದೆ.!