ಬೆಂಗಳೂರು : ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ . ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ . ನವೆಂಬರ್ 17 ಮತ್ತು 18 ರಂದು ಮಳೆ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ .

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಬೆಂಗಳೂರಿನಲ್ಲಿ ಮಳೆ ಮುಂದುವರೆದಿದ್ದು , ಸಂಜೆಯಾಗುತ್ತಿದ್ದಂತೆ ಮಳೆ ಧಾರಾಕಾರವಾಗ ಸುರಿಯಲಾರಂಭಿಸಿದೆ .