ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.

ಕೋವಿಡ್-19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ . ಹಾಗಾಗಿ ರಾಜ್ಯದಲ್ಲಿ ಈಗ ಏನು ಲಾಕ್ ಡೌನ್ ಇದೆಯೋ ಹಾಗೇ ಇನ್ನೆರೆಡು ದಿನ. ಆ ನಂತರ ರಾಜ್ಯದ  ಸ್ಪಷ್ಟ ಚಿತ್ರಣ ಸಿಗಲಿದೆ.!