ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆ.19ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಇನ್ನು, ಬೀದರ್, ಯಾದಗಿರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.