ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಮಾಣ ಇಲಾಖೆ ಹೇಳಿದೆ.

ಈ ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದ್ದು, ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮಳೆ ಆರ್ಭಟ ಹೆಚ್ಚಾಗಲಿದೆ. ಮುಂದಿನ 2 ವಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುವ ನಿರೀಕ್ಷೆ ಇದೆಯಂದು ಹೇಳಿದೆ.

ಈ ಭಾನುವಾದೊಳಗೆ  ರಾಜ್ಯದ ಎಲ್ಲ ಭಾಗಗಳಲ್ಲೂ ಮಳೆಯಾಗಲಿದ್ದು, 24 ಗಂಟೆಗಳಲ್ಲಿ 115 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.