ಬೆಂಗಳೂರು: ರಾಜ್ಯದ ಒಳನಾಡಿನ ಮುಂಗಾರು ಚುರುಕುಗೊಂಡಿರುವುದರಿಂದ ಜುಲೈ 21 ರಂದು 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಧಾರವಾಡ, ಹಾವೇರಿ, ಕಲಬುರ್ಗಿ, ಚಾಮರಾಜನಗರ, ಬೀದರ್, ಬೆಳಗಾವಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.