ಬೆಳಗಾವಿ: ಕೊರೋನಾ ಜೊತೆ ನಾವು ಬದುಕಬೇಕಿದೆ. ಹೀಗಾಗಿ, ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಲವು ಸಾಂಕ್ರಾಮಿಕ ರೋಗಗಳು ದೇಶದಲ್ಲಿ ಬಂದಿವೆ, ಹೋಗಿವೆ. ಕೆಲ ಕಾಯಿಲೆಗಳೊಂದಿಗೆ ನಾವು ಬದುಕುತ್ತಿದ್ದೇವೆ. ಕೊರೋನಾ ಗುಣವಾಗದಂಥ ರೋಗವೇನೂ ಅಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್‌ ಧರಿಸಬೇಕು. ಹೀಗಾಗಿ, ಯಾರೂ ಆತಂಕ ಪಡಬೇಕಾಗಿಲ್ಲ ಎಂದರು.