ಬೆಂಗಳೂರು: ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ಪೈಕಿ ಇಂದು 222 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಬೆಳಗ್ಗೆಯಿಂದಲೇ ಮತದಾರರು ಮತಗಟ್ಟೆಗೆ ತೆರಳಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಈ ನಡುವೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ. 33.42 ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಘರ್ಷಣೆ ಗೊಂದಲದ ಹೊರತಾಗಿ ಕೂಡ ಬೆಳಗ್ಗೆ 9.15ರ ಹೊತ್ತಿಗೆ ರಾಜ್ಯಾದ್ಯಂತ ಶೇ. 11ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿತ್ತು. ಅದರಂತೆ ಇಂದು ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ. 33.42 ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.