ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚೇತರಿಕೆ ಕಂಡಿದ್ದು, ಕಳೆದ 2 ದಿನಗಳಿಂದ ಕೆಲವೆಡೆ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ.

 ರಾಜ್ಯದ ದಕ್ಷಿಣ ಒಳನಾಡು ಮತ್ತು ಪೂರ್ವಭಾಗ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.