ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜು.2ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.!