ಬೆಂಗಳೂರು: ಇಂದಿನಿಂದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ರಾಜ್ಯದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು ಆ.13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಕಡಿಮೆ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.