ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.