ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ,  ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.