ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನದ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ.

ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆಯಾಗಿರುವ ನಡುವೆಯೇ ಇದೀಗ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಈ ಸಂಬಂಧ ಮಂಗಳವಾರ ಸುತ್ತೋಲೆ ಹೊರಡಿಸಿದ್ದಾರೆ. ಉತ್ಸವ, ಜಾತ್ರೆ, ಬ್ರಹ್ಮ ರಥೋತ್ಸವಕ್ಕೆ ಅವಕಾಶವಿಲ್ಲ. ಆದರೆ, ಸರಳವಾಗಿ ದೇವಸ್ಥಾನ ಆವರಣದೊಳಗೆ ನಡೆಸಲು ಅನುಮತಿ ನೀಡಲಾಗಿದೆ.