ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬೆಳಗಾವಿ, ಬೀದರ್, ಧಾರವಾಡ ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ , ತುಮಕೂರು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.