ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಘೋಷಿಸಿದ್ದರೂ ಜನತೆ ಮಾತ್ರ ಕ್ಯಾರೆ ಅನ್ನುತ್ತಿಲ್ಲ. ಪೊಲೀಸರ ಮನವಿಗೂ ಲಾಠಿ ಏಟಿಗೂ ಜನತೆ ಬಗ್ಗುತ್ತಿಲ್ಲ. ಹೀಗಾಗಿ ಸಿಎಂ ಯಡಿಯೂರಪ್ಪ ರಾಜ್ಯದ ಜನತೆ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಯಡಿಯೂರಪ್ಪ, ಲಾಕ್ ಡೌನ್ ನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಏ.14ಕ್ಕೆ ಇದು ಮುಗಿಯುತ್ತದೆ. ಇಲ್ಲವಾದರೆ ಇನ್ನಷ್ಟು ದಿನ ಈ ಲಾಕ್ ಡೌನ್ ಮುಂದುವರೆಯಲಿದೆ . ಹೀಗಾಗಿ ಎಲ್ಲರೂ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಜನತೆ ಯಾವುದೇ ಸುಳ್ಳು, ವದಂತಿಗಳಿಗೆ ಕಿವಿಗೊಡಬೇಡಿ. ಸರಿಯಾಗಿ ಲಾಕ್ ಡೌನ್ ಪಾಲಿಸುವಂತೆ ಸಿಎಂ ಮನವಿ ಮಾಡಿದ್ದಾರೆ.