ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಮಾತ್ರವೇ ಜಾರಿಯಲ್ಲಿದ್ದಂತ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಕಡ್ಡಾಯ ನಿಯಮವನ್ನು ರಾಜ್ಯಾಧ್ಯಂತ ವಿಸ್ತರಿಸಲಾಗಿದೆ. ಅಲ್ಲದೇ ಹೆಲ್ಮೆಟ್ ಧರಿಸದೇ ಸಂಚಾರಿ ಪೊಲೀಸರಿಗೆ ಸಿಕ್ಕಿಬಿದ್ದರೇ, ಅಂತಹ ವಾಹನ ಸವಾರರ ಪರವಾನಗಿಯನ್ನೇ ಮೂರು ತಿಂಗಳು ಅಮಾನತುಗೊಳಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹೆಲ್ಮೆಟ್ ಧರಿಸದೇ ಸಂಚರಿಸುವ ಸವಾರರ ವಿರುದ್ಧ ವಾಹನಗಳ ಕಾಯ್ದೆ 1988 ಕಲಂ 194-ಟಿ ಅನ್ವಯ ದಂಡ ವಸೂಲಾತಿಯೊಂದಿಗೆ ವಾಹನ ಸವಾರರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾಗುತ್ತದೆ. ಈ ನಿಮಯ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ತಿಳಿಸಿದೆ.