ಬೆಂಗಳೂರು: ರಾಜ್ಯದಲ್ಲಿ ದೋಸ್ತಿ ಸರಕಾರ ಅಧಿಕಾರಕ್ಕೆ ಬಂದ್ರು ಸಹ ಎಲ್ಲವೂ ನೆಟ್ಟಗಿಲ್ಲ  ಎಂಬುದು ಸಾಭಿತಾಗುತ್ತಿದೆ. ಇದರ ಪರಿಸ್ಥಿಯನ್ನು ಲಾಭಮಾಡಿಕೊಳ್ಳಲು ಬಿಜೆಪಿ ಲೆಕ್ಕಾಹಾಕುತ್ತಿರುವ ಸಂದರ್ಭದಲ್ಲಿ ಬಿಜೆಪಿ ವರಿಷ್ಠರಾದ ಅಮಿತ್ ಶಾ ಅವರು ಯಡಿಯೂರಪ್ಪರನ್ನು ಕರೆಯಿಸಿ ಏನು ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತದಲ್ಲಿ ಹಸ್ತಕ್ಷೇಪ ಮಾಡಿ ಪರಿಸ್ಥಿತಿಯ ಲಾಭ ಪಡೆದುಕೊಳ್ಳದೆ ಲೋಕಸಭೆ ಚುನಾವಣೆಗೆ ಸಿದ್ಧರಾಗಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ. ಅಹಮದಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಶಾ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿನ್ನೆ ಭೇಟಿ ಮಾಡಿ ಮಾತುಕತೆ ನಡೆಸಿದ ವೇಳೆ ಕರ್ನಾಟಕದ ರಾಜಕೀಯ ಸ್ಥಿತಿಗತಿಗಳನ್ನು ಮನವರಿಕೆ ಮಾಡಿದರು.

ಈ ವೇಳೆ ಅಮಿತ್‍ಶಾ ಕರ್ನಾಟಕದ ರಾಜಕೀಯ ಕುರಿತಂತೆ ಮಾತನಾಡಲು ಹೆಚ್ಚು ಆಸಕ್ತಿ ತೋರದಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ನಾವು ಎರಡೂ ಪಕ್ಷಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡದೆ ವಿರೋಧ ಪಕ್ಷವಾಗಿ ರಚನಾತ್ಮಕವಾಗಿ ಕೆಲಸ ಮಾಡಿ ಜನರ ಪ್ರೀತಿ ಪಾತ್ರಗಳಿಸಿರಿ ಎಂದು ಸಲಹೆ ಮಾಡಿದ್ದಾರೆ.
ಒಂದು ವೇಳೆ ನಾವೇನಾದರು ಎರಡು ಪಕ್ಷಗಳ ಭಿನ್ನಮತವನ್ನು ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸಿದರೆ ಕಾಂಗ್ರೆಸ್-ಜೆಡಿಎಸ್ ನಾಳೆ ಒಂದಾಗಿ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಿದೆ ಎಂದು ಅಪಪ್ರಚಾರ ನಡೆಸುತ್ತಾರೆ. ಇದರಿಂದ ಲೋಕಸಭೆ ಚುನಾವಣೆಯ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅಮಿತ್ ಶಾ ಅವರು ಯಡಿಯೂರಪ್ಪ ಹಾಗೂ ಅವರ ಜತೆ ಬಂದಿದ್ದ ಆಪ್ತರಿಗೆ ಕಿವಿಮಾತು ಹೇಳಿದ್ದಾರೆ  ಎಂದು ತಿಳಿದುಬಂದಿದೆ.