ಬೆಂಗಳೂರು :, ಈ ತಿಂಗಳ 24 ಕ್ಕೆ ಮುಕ್ತಾಯವಾಗುತ್ತಿದ್ದ  ಕೃಷಿ ಬೆಳೆ ಸಮೀಕ್ಷೆಯನ್ನು ಒಂದು ತಿಂಗಳು ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.!

ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರು ಈ ಹಿಂದೆ ಒಂದೇ ಬೆಳೆಗಳನ್ನು ಮೊಬೈಲ್ ಗೆ ಅಪ್ ಲೋಡ್ ಮಾಡುತ್ತಿದ್ದುದರಿಂದ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಇದನ್ನು ತಪ್ಪಿಸುವ ಸಲುವಾಗಿಯೇ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿದ್ದೇವೆ. ಸದ್ಯ ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ನೋಂದಣಿ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.