ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಜುಲೈ 20, ಹಾಗೂ 21ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.