ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ.

ಒಟ್ಟು 523 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಿಕೊಳ್ಳಲಿದ್ದು, ಅರ್ಹ ಅಭ್ಯರ್ಥಿಗಳು ಆ.20ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಹುದ್ದೆಗೆ ಅನುಸಾರವಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ಮಾಹಿತಿ ಅಧಿಸೂಚನೆಯನ್ನು ಪರಿಶೀಲಿಸಿ.