ಬೆಂಗಳೂರು; ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಜು.15 ಮತ್ತು 16ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದ ಪೂರ್ವ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರ್ಗಿ, ಬೀದರ್, ಧಾರವಾಡ, ರಾಯಚೂರು ಹಾಗೂ ಯಾದಗಿರಿ, ಉತ್ತರಕನ್ನಡ . ಉಡುಪಿ ಚಿಕ್ಕಮಗಳೂರು, ಹಾಸನ , ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ