ಬೆಂಗಳೂರು: ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಮುಂದೆ ಯಡಿಯೂರಪ್ಪ ಹೇಳಿದ್ದು ನನಗೆ ಅವಕಾಶ ಕೊಟ್ಟರೆ ನಾವು ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದರು.

ಮಂಗಳವಾರ ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿ, ರಾಜಭವನದಿಂದ ಹೊರಬಂದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಅವಕಾಶ ಕೊಟ್ಟರೆ ಬಹುಮತ ಸಾಬೀತು ಪಡಿಸುತ್ತೇವೆ. ಈ ಅಂಶವನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದರು.