ಬೆಂಗಳೂರು; ಜೂ.19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.

ಈ ಸಂಬಂಧ ಪಕ್ಷದ ಮಧ್ಯಂತರ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಅವರು ಘೋಷಣೆ ಮಾಡಿದ್ದಾರೆ.

ಜೆಡಿಎಸ್ ನ ಕುಪೇಂದ್ರ ರೆಡ್ಡಿ, ಬಿಜೆಪಿಯ ಪ್ರಭಾಕರ್ ಕೋರೆ, ಕಾಂಗ್ರೆಸ್ ನ ರಾಜೀವ್ ಗೌಡ ಮತ್ತು ಬಿ.ಕೆ.ಹರಿಪ್ರಸಾದ್ ಅವರ ಸ್ಥಾನಗಳು 2020ರ ಜೂ.25ರಂದು ಖಾಲಿಯಾಗಲಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಅವರು ಪ್ರಸ್ತುತ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.