ಬೆಂಗಳೂರು; ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ರಾಜ್ಯಸಭೆಗೆ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಆರಿಸಿ ಕಳುಹಿಸಲು ನಿರ್ಧರಿಸಿದ್ದೇವೆ ಎಂದರು.

ಹಾಗೇಯೆ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲ್ಲ. ಒಂದು ಸ್ಥಾನಕ್ಕೆ ಜೆಡಿಎಸ್ ಗೆ ಬೆಂಬಲ ನೀಡುವಿರಾ ಎಂಬ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲ್ಲ ಎಂದರು.