ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗವು ಇಂದು ಮಹತ್ವದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದ 24 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು.

ಈ ಸದರಿ ಹುದ್ದೆಗಳಿಗೆ ಜು.7ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯು ಬೆಂಗಳೂರಿನಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದೆ.