ಬೆಂಗಳೂರು: ರಾಜೀನಾಮೆ ನೀಡಿ ಪ್ರತಿಭಟನೆಗೆ ಮುಂದಾಗಿದ್ದ 508 ಗುತ್ತಿಗೆ ವೈದ್ಯರ ಮಾತಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಸಂಪುಟ ಷರತ್ತುಬದ್ಧ ಒಪ್ಪಿಗೆ ನೀಡಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ರಾಜ್ಯ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಗುತ್ತಿಗೆ ವೈದ್ಯರ ನೇಮಕಾತಿ ಕುರಿತು ಚರ್ಚಿಸಲಾಗಿದೆ. ವೈದ್ಯರು ಸಲ್ಲಿಸಿರುವ ಸೇವಾ ಅವಧಿ ಆಧಾರದ ಮೇರೆ ಖಾಯಂ ಮಾಡಲಿದ್ದೇವೆ. ಪ್ರತಿ ಆರು ತಿಂಗಳು ಸೇವಾ ಅವಧಿಗೆ 2.5 ಕೃಪಾಂಕ ನೀಡಲು ತಿರ್ಮಾನಿಸಲಾಗಿದೆ ಎಂದು ಹೇಳಿದರು.