ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ, ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ನಿಗಾ ಘಟಕಗಳನ್ನು (ಐಸಿಯು) ಸ್ಥಾಪಿಸಲು ಮುಂದಾಗಿದೆ.

ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿ ಮಾಡಲಾಗಿರುವ ಕೋವಿಡ್ ಬೆಡ್ ಮತ್ತಿತರ ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ಪ್ರತಿ ಕೋವಿಡ್ ಕೇರ್ ಕೇಂದ್ರದಲ್ಲೂ 10 ಐಸಿಯು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.