ಬೆಂಗಳೂರು: ಯಾವ ವ್ಯಕ್ತಿಗಳನ್ನು ಕೊರೋನಾ ಪರೀಕ್ಷೆಗೊಳಪಡಿಸಲು ತಿಳಿಸಲಾಗಿದೆಯೋ ಅಂತಹ ಎಲ್ಲಾ ವ್ಯಕ್ತಿಗಳು ಕಡ್ಡಾಯವಾಗಿ ಪರಿಕ್ಷೆಗೊಳಪಡಬೇಕು ಎಂದು ರಾಜ್ಯ ಸರ್ಕಾರ ಇಂದು  ಸುಗ್ರೀವಾಜ್ಞೆ ಹೊರಡಿಸಿದೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ 2020ರ ಪ್ರಕಾರ ಅಧಿಕಾರವನ್ನು ಚಲಾಯಿಸಿ, ಈ ಆದೇಶವನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕಡ್ಡಾಯವಾಗಿ ಪರಿಕ್ಷೆಗೊಳಪಡುವುದರಿಂದ ಕೊರೋನಾ ಸೋಂಕನ್ನು ನಿಯಂತ್ರಿಸಬಹುದು ಮತ್ತು ಜೀವವನ್ನು ಉಳಿಸಿಕೊಳ್ಳಬಹುದೆಂದು ತಿಳಿಸಿದೆ.