ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದ್ದು, ಭರ್ಜರಿ ಸಿದ್ದತೆಗಳು ನಡೆಯುತ್ತಿವೆ.

ಆಯೋಧ್ಯೆಯ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಗಣ್ಯರನ್ನ ಆಹ್ವಾನಿಸುತ್ತಿದ್ದು, ನಮ್ಮ ಕರ್ನಾಟಕದ ಎಂಟು ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಆಹ್ವಾನಿಸಲಾದ ಎಂಟು ಮಂದಿ ವಿಶೇಷ ಆಹ್ವಾನಿತರ ಪಟ್ಟಿ ಯಲ್ಲಿ

  1. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
  2. ಇಸ್ಕಾನ್ ನ ಮಧುಪಂಡಿತ ದಾಸ್
  3. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
  4. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
  5. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
  6. ಸುತ್ತೂರು ಮಠದ ಶ್ರೀಗಳು
  7. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
  8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ