ಬೆಂಗಳೂರು : ಕರ್ನಾಟಕದಲ್ಲಿ ಅದೂ ತವರು ಕ್ಷೇತ್ರದಲ್ಲೇ ಭಾರೀ ಅಂತರದಿಂದ ಹೀನಾಯವಾಗಿ ಸೋಲುಂಡಿದ್ದ ಸಿದ್ದರಾಮಯ್ಯ ಮೂಲೆ ಗುಂಪಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಇದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಆದರೆ ಕರ್ನಾಟಕದಲ್ಲಿ ಉತ್ತಮ ಆಡಳಿತ ನೀಡಿ ದೇಶಕ್ಕೆ ಮಾದರಿಯಾಗಿದ್ದ ಸಿದ್ದರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಹೌದು ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ ಸ್ವತಃ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರೇ ಕರೆ ಮಾಡಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರಂತೆ. ಹೀಗಂತ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಮೈಸೂರು ಅಥವಾ ಕೊಪ್ಪಳದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದೆಡೆ ಈಗಿರುವ ಮೈತ್ರಿ ಸರ್ಕಾರ ಗಟ್ಟಿಯಾಗಿ ಉಳಿದರೆ 30 ತಿಂಗಳ ಬಳಿಕ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ

ಹಾಗಾಗಿ ರಾಷ್ಟ್ರರಾಜಕಾರಣಕ್ಕೆ ಸಿದ್ದರಾಮಯ್ಯರು ಸೂಕ್ತ ಅಂತ ವರಿಷ್ಟರಿಗೆ ತಿಳಿದಿದೆಯಂತೆ.