ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲದ 50 ಸಾವಿರವನ್ನು ಮೊದಲ ಕಂತಿನಲ್ಲಿ ಪಾವತಿಸುತ್ತೇವೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ರೈತರ ಸಮಸ್ಯೆಗಳ ಚರ್ಚಿಸಲು ರೈತ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಅದಕ್ಕಾಗಿ ಈ ವರ್ಷ 6,500 ಕೋಟಿ ಮೀಸಲಿಡಲಾಗಿದೆ 17 ಲಕ್ಷ ಖಾತೆದಾರರ ಪೈಕಿ 50ಸಾವಿರಕ್ಕಿಂತ ಕಡಿಮೆ ಸಾಲ ಪಡೆದವರ ಸಂಖ್ಯೆ 1.51 ಲಕ್ಷ ಇದೆ ಎಂದರು.