ಬೆಂಗಳೂರು:ರೇಸ್ ಕೋರ್ಸ್ ಕಚೇರಿ ಮೇಲೆ ಸಿಸಿಬಿ ದಾಳಿ: 96 ಲಕ್ಷ ನಗದು ಹಣ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ರೇಸ್ ಕೋರ್ಸ್ ಕಚೇರಿಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 40ಕ್ಕೂ ಹೆಚ್ಚು ಮಂದಿ ಬಂಧಿಸಿದ್ದು, 96 ಲಕ್ಷ ರೂ.ಹಣ ವಶಕ್ಕೆ ಪಡೆದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್​​​ ಹೇಳಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್‌ನಂತೆಯೇ ಕುದುರೆ ರೇಸ್‌ನಲ್ಲೂ ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಅಪರಾಧ ವಿಭಾಗದ ಜಂಟಿ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ.