ಬೆಂಗಳೂರು : ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರಿಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ರೈತರಿಗೆ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಕೊರತೆಯಾಗದಂತೆ ಕ್ರಮ ವಹಿಸಲಾಗಿದ್ದು, ಕಳೆದ ಬಾರಿಗಿಂತ ಹೆಚ್ಚುವರಿಯಾಗಿ ಯೂರಿಯಾ ಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, ರಾಜ್ಯಾದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಇದುವರೆಗೂ 3,29,862.8 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ನೀಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಇನ್ನು 52,110 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.